ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ತಂಡ ನಮೀಬಿಯಾ ವಿರುದ್ಧ ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ಆದರೆ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ ಎದುರಾಗಿದೆ. ಅಭ್ಯಾಸದ ವೇಳೆ ಮತ್ತೊಬ್ಬ ಆಟಗಾರ ಗಾಯಗೊಂಡಿರುವ ಹಿನ್ನೆಲೆ, ಭಾರತ ತಂಡದಲ್ಲಿ ಬರೋಬ್ಬರಿ ಮೂರು ಪ್ರಮುಖ ಬದಲಾವಣೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
🇮🇳 ಭಾರತ ತಂಡದಲ್ಲಿ 3 ದೊಡ್ಡ ಬದಲಾವಣೆ?
ಯುಎಸ್‌ಎ ವಿರುದ್ಧ ಭರ್ಜರಿ ಆರಂಭ ಮಾಡಿದ ಟೀಂ ಇಂಡಿಯಾ ಇದೀಗ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಮೀಬಿಯಾ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಗಾಯದ ಸಮಸ್ಯೆ ತಂಡದ ಸಮತೋಲನವನ್ನು ಕೆಡಿಸುವ ಆತಂಕ ಉಂಟಾಗಿದೆ. ಇಂದಿನ ಪಂದ್ಯದಲ್ಲಿ ಮೂರು ಪ್ರಮುಖ ಬದಲಾವಣೆಗಳು ಬಹುತೇಕ ಖಚಿತ ಎನ್ನಲಾಗುತ್ತಿದೆ.
🤕 ಅಭಿಷೇಕ್ ಶರ್ಮಾಗೆ ವಿಶ್ರಾಂತಿ
ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಅವರು ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ. ಸಂಪೂರ್ಣ ಫಿಟ್ ಆಗಿಲ್ಲದ ಹಿನ್ನೆಲೆ, ಇಂದಿನ ಪಂದ್ಯಕ್ಕೆ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ.
🏏 ಸಂಜು ಸ್ಯಾಮ್ಸನ್‌ಗೆ ಗೋಲ್ಡನ್ ಚಾನ್ಸ್!
ಅಭಿಷೇಕ್ ಹೊರಗುಳಿದರೆ, ಕೇರಳದ ವಿಕೆಟ್‌ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳಲು ಸಂಜುಗೆ ಇದು ಅತ್ಯಂತ ಮಹತ್ವದ ಪಂದ್ಯವಾಗಲಿದೆ. ಈ ಅವಕಾಶವನ್ನು ಮಿಸ್ ಮಾಡಿದರೆ ಮುಂದಿನ ಅವಕಾಶ ಕಷ್ಟ ಎನ್ನಲಾಗುತ್ತಿದೆ.
🚑 ಇಶಾನ್ ಕಿಶನ್ ಗಾಯಗೊಂಡರೇ?
ನೆಟ್ ಪ್ರಾಕ್ಟೀಸ್ ವೇಳೆ ಜಸ್ಪ್ರೀತ್ ಬುಮ್ರಾ ಎಸೆದ ಯಾರ್ಕರ್ ಚೆಂಡು ನೇರವಾಗಿ ಇಶಾನ್ ಕಿಶನ್ ಕಾಲ್ಬೆರಳಿಗೆ ತಗುಲಿದ ಪರಿಣಾಮ ಅವರು ಗಾಯಗೊಂಡಿದ್ದಾರೆ. ಇಂದಿನ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನಾಸ್ಪದವಾಗಿದೆ.
🌪 ವಾಷಿಂಗ್ಟನ್ ಸುಂದರ್‌ಗೆ ಅವಕಾಶ?
ಇಶಾನ್ ಕಿಶನ್ ಹೊರಬಿದ್ದರೆ ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ಹನ್ನೊಂದರಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.
💥 ಬುಮ್ರಾ ಕಮ್‌ಬ್ಯಾಕ್!
ಮೊದಲ ಪಂದ್ಯದಲ್ಲಿ ಆಡದ ಜಸ್ಪ್ರೀತ್ ಬುಮ್ರಾ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ತಂಡ ಸೇರಿಕೊಂಡರೆ ಮೊಹಮ್ಮದ್ ಸಿರಾಜ್ ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗಬಹುದು.
ಇಂದಿನ ಪಂದ್ಯದಲ್ಲಿ ಭಾರತ ಯಾವ ರೀತಿಯ ತಂಡದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಕುತೂಹಲ ಹೆಚ್ಚಿಸಿ
READ MORE
